HomeKarnatakaಮುಡಾ ಹಗರಣ: ನಾಳೆ ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಮುಡಾ ಹಗರಣ: ನಾಳೆ ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃಧ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ ಪೊಲೀಸರು ಜನವರಿ 27ರ ಸೋಮವಾರ ಹೈಕೋರ್ಟ್ ಗೆ ವಿಚಾರಣೆ ವರದಿ ಸಲ್ಲಿಸಲಿದ್ದಾರೆ.

ಸಾಮಾಜಿಕ ಹೋರಾಟಗಾರರ ಸ್ನೇಹಮಯಿ ಕೃಷ್ಣ ಮತ್ತಿತರರು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದರು. ನಂತರ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮೂರನೇ ಆರೋಪಿಯಾಗಿದ್ದಾರೆ. ಜಮೀನಿನ ಮಾಲೀಕ ದೇವರಾಜು ನಾಲ್ಕನೇ ಆರೋಪಿಯಾಗಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿದೆ. ನಾಳೆ ಹೈಕೋರ್ಟ್ ಗೆ ವರದಿ ಸಲ್ಲಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮುಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿದ ಅರ್ಜಿ ಹೈಕೋರ್ಟ್ ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular