ಉಡುಪಿ: ಅಪರಿಚಿತ ಯುವಕ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ಅಪರಿಚಿತ ಯುವಕ ಹೀನಕೃತ್ಯವೆಸಗಿದ್ದಾನೆ.
ಈ ಬಗ್ಗೆ ಬಾಲಕಿಯ ಪೋಷಕರು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಾಲಕಿಗೆ ಅಪರಿಚಿತ ಲೈಂಗಿಕ ಕಿರುಕುಳ ನೀಡಿದ ಯುವಕನ ಗುರುತು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ.
ಘಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಖಂಡಿಸಿದ್ದಾರೆ. ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ.