ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ನಟ ಶಿವರಾಜ್ ಕುಮಾರ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಅಮೆರಿಕದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿ ಭಾನುವಾರ ಬೆಂಗಳೂರಿಗೆ ಆಗಮಿಸಿದ ಶಿವಣ್ಣರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.
ಡಿಸೆಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಅವರು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಅಮೆರಿಕದಲ್ಲಿ ವಿಶ್ರಾಂತಿ ಪಡೆದಿದ್ದು, ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿದ್ದಾರೆ.
ವಿಮಾನ ನಿಲ್ದಾಣ ಬಳಿಯ ಶಿವಣ್ಣ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ ಅಭಿಮಾನಿಗಳು ಅವರ ನಿವಾಸದವರೆಗೆ ಅದ್ದೂರಿ ಮೆರವಣಿಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಏರ್ಪೋರ್ಟ್ ರಸ್ತೆ ಮತ್ತು ಶಿವರಾಜ್ ಕುಮಾರ್ ನಿವಾಸದ ಬಳಿ ಶುಭ ಕೋರಿದ ಕಟೌಟ್ ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಶಿವಣ್ಣ ಆಗಮನದ ಹಿನ್ನೆಲೆಯಲ್ಲಿ ಅನ್ನ ಸಂತರ್ಪಣೆ ಆಯೋಜಿಸಿದ್ದಾರೆ.