alex Certify ದೆಹಲಿ ಕರ್ತವ್ಯಪಥದಲ್ಲಿ ರಾರಾಜಿಸಿದ ರಾಜ್ಯದ ಸ್ತಬ್ಧಚಿತ್ರ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಕರ್ತವ್ಯಪಥದಲ್ಲಿ ರಾರಾಜಿಸಿದ ರಾಜ್ಯದ ಸ್ತಬ್ಧಚಿತ್ರ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು

ಗಣರಾಜ್ಯೋತ್ಸವ ಅಂಗವಾಗಿ ದೆಹಲಿ ಕರ್ತವ್ಯಪಥದಲ್ಲಿ ರಾಜ್ಯದ ಪರವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿತ್ತು.

ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.

ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ 50ಕ್ಕೂ ಹೆಚ್ಚು ಜನ ಕಲಾವಿದರು, ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕರ್ತವ್ಯಪಥದಲ್ಲಿ ಸೇರಿದ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ.

ಸ್ತಬ್ದಚಿತ್ರದ ಮೇಲ್ಭಾಗದಲ್ಲಿ 10 ಜನ ಕಲಾವಿದರು ಸೇರಿದಂತೆ 18 ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ಶಿಲ್ಪಕಲೆಯ ತೊಟ್ಟಿಲು ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ, ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...