ಬೆಂಗಳೂರು: ಸಿನಿಮಾ ಹಾಗೂ ಕಿರುತೆರೆ ನಟಿ ಶಶಿಕಲಾ ಅಲಿಯಾಸ್ ಸುಶೀಲಮ್ಮ ಎಂಬುವರ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ನಿರ್ದೇಶಕ ಹರ್ಷವರ್ಧನ್ ದೂರಿನ ಮೇರೆಗೆ ದೂರು ದಾಖಲಾಗಿದೆ. ಬ್ಲಾಕ್ ಮೇಲ್ ಮಾಡಿ ಮದುವೆಯಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಟಿಯ ವಿರುದ್ಧ ಹರ್ಷವರ್ಧನ್ ದೂರು ನೀಡಿದ್ದಾರೆ. ‘ಪ್ರಜಾರಾಜ್ಯ’ ಸಿನಿಮಾ ನಿರ್ದೇಶನ ಮಾಡಿದ್ದ ಹರ್ಷವರ್ಧನ್ ಹಲವು ಸಿನಿಮಾ ಮತ್ತು ಸೀರಿಯಲ್ ಗಳಲ್ಲಿ ನಟಿಸಿರುವ ಶಶಿಕಲಾ ವಿರುದ್ಧ ದೂರು ನೀಡಿದ್ದಾರೆ. ಅಮ್ಮನ ಮಡಿಲು ಎನ್ನುವ ಅನಾಥಾಶ್ರಮವನ್ನು ಶಶಿಕಲಾ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.