ಗದಗ: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ನೊಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿದ್ದು, ಹಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಕಾನೂನು ಜಾರಿ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಫೈನಾನ್ಸ್ ನವರಿಂದ ಆಗುತ್ತಿರುವ ತೊಂದರೆಗಳಿಗೆ ಕಡಿವಾಣ ಹಾಕಲು ಕಾನೂನು ಜಾರಿಗೆ ತರಲಾಗುತ್ತಿದೆ. ಈಗಾಗಲೇ ಕಾನೂನಿನ ರೂಪುರೇಷೆ ಸಿದ್ಧಪಡಿಸಿ ಕಂದಾಯ, ಪೊಲೀಸ್ ಅಧಿಕಾರಿಗಳಿಗೆ ಡ್ರಾಫ್ಟ್ ನೀಡಲಾಗಿದ್ದೇವೆ. ಮೂರ್ನಾಲ್ಕು ದಿನಗಳಲಿ ಕಾನೂನು ಸ್ವರೂಪ ಗೊತ್ತಾಗಲಿದೆ ಎಂದರು.
ಜ.30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ಕೊಂಡೊಯ್ಯುತ್ತೇವೆ. ಅಷ್ಟರಲ್ಲಿ ಗೃಹ ಸಚಿವರು, ಕಂದಾಯ ಸಚಿವರು, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರೂ ಸೇರಿ ಸಮಾಲೋಚನೆ ನಡೆಸುತ್ತೇವೆ. ಬಳಿಕ ಮುಖ್ಯಮಂತ್ರಿಗಳಿಗೆ ಕಾನೂನು ಪ್ರತಿ ಸಲ್ಲಿಕೆ ಮಾಡುತ್ತೇವೆ. ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.