
ಹಾಸನ: ಮೈಕ್ರೋ ಫೈನಾನ್ಸ್ ವ್ಯಾಪ್ತಿಗೆ ಧರ್ಮಸ್ಥಳ ಸಂಘ ಬರುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಧರ್ಮಸ್ಥಳ ಸಂಘದ ಸಾಲ ಸೌಲಭ್ಯ ಕುರಿತಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿ ಧರ್ಮಸ್ಥಳ ಸಂಘ ಮೈಕ್ರೋಫೈನಾನ್ಸ್ ವ್ಯಾಪ್ತಿಗೆ ಬರುವುದಿಲ್ಲ. ಅವರು ಗ್ರಾಮೀಣ ಯೋಜನೆ ಎಂದು ಮಾಡಿಕೊಂಡಿದ್ದಾರೆ. ಸ್ವಸಹಾಯ ಸಂಘ ಮಾಡಿ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ವಸಹಾಯ ಸಂಘಗಳಿಗೆ ಸಾಲ ಕೊಡುತ್ತಾರೆ. ಧರ್ಮಸ್ಥಳದ ಹಣ ಎಂದು ಯಾರೂ ಕೂಡ ಬಾಕಿ ಉಳಿಸಿಕೊಳ್ಳುವುದಿಲ್ಲ. ಅವರು ಕಿರುಕುಳ ನೀಡುತ್ತಾರೆ ಎಂದು ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.
ಮೈಕ್ರೋಫೈನಾನ್ಸ್ ಕಿರುಕುಳದ ಬಗ್ಗೆ ಈಗಾಗಲೇ ಸಿಎಂ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಹೊಸ ಕಾಯ್ದೆ ತರುವ ಕುರಿತು ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು. ಜನರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಮೀಟರ್ ಬಡ್ಡಿ ದಂಧೆ, ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.