ಬೆಂಗಳೂರು: ಮೆಜೆಸ್ಟಿಕ್ ಕೆಎಸ್ಆರ್ ನಿಲ್ದಾಣದಲ್ಲಿ 222 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹೆಚ್ಚುವರಿ ಪ್ಲಾಟ್ ಫಾರಂ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ.
ಮಹಾತ್ಮ ಗಾಂಧಿ ರೈಲ್ವೆ ಕಾಲೋನಿಯ ರೈಲ್ವೆ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥೆ ಅಮಿತೇಶ್ ಕುಮಾರ್ ಸಿನ್ಹಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ರೈಲುಗಳ ಸುಗಮ ಸಂಚಾರ, ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಎರಡು ಪ್ಲಾಟ್ ಫಾರಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 222 ಕೋಟಿ ರೂ. ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರೆತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ವಿಭಾಗದಲ್ಲಿ 6.14 ಕಿಲೋ ಮೀಟರ್ ಉದ್ದದ ಬೈಪಾಸ್ ಮಾರ್ಗಕ್ಕೆ ರೈಲ್ವೆ ಮಂಡಳಿ 248 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿದೆ. ರೈಲುಗಳ ಸಮಯ ಪಾಲನೆ ಮತ್ತು ವೇಗ ಸುಧಾರಣೆಗೆ ಕೆಎಸ್ಆರ್ ಬೆಂಗಳೂರು- ಜೋಲಾರ್ ಪೇಟೈ ಭಾಗದಲ್ಲಿ ಸೆಕ್ಷನಲ್ ವೇಗವನ್ನು 130 ಕಿಲೋಮೀಟರ್ ಗೆ ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.