ಬೆಂಗಳೂರು : ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡುವುದರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಇಂದು ದೀಪಾಲಂಕಾರ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ:27.01.2025 ರಂದು ಸಂಜೆ:4.30 ಗಂಟೆಗೆ ಅನಾವರಣ ಮಾಡುವುದರಿಂದ, ದಿನಾಂಕ:27.01.2025ರ ಸಂಜೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆ ಮಾಡುವಂತೆ ತಿಳಿಸಿರುತ್ತಾರೆ.
ಕಾರ್ಯಕ್ರಮವು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ, ದಿನಾಂಕ:27.01.2025ರ ಸಂಜೆ 4.30 ಗಂಟೆಗೆ ಜರಗುವ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದ ಅಂಗವಾಗಿ ದಿನಾಂಕ:27.01.2025ರ ಸಂಜೆಯಿಂದ ಬೆಂಗಳೂರಿನಲ್ಲಿರುವ ಎಲ್ಲಾ ಸರ್ಕಾರಿ, ಅರ ಸರ್ಕಾರಿ ಕಚೇರಿ / ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆ ಮಾಡಲು ಅಧೀನ ಕಛೇರಿಗಳಿಗೆ ಅಗತ್ಯ ಸೂಚನೆ ನೀಡಲು ಕೋರಿದೆ.