ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಲ್ಲಿ ಕಬ್ಬಿಣದ ಪೈಪ್ ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗಿದೆ.
ಲಾರಿ ಪಲ್ಟಿಯಾದ ಪರಿಣಾಮ ಕಬ್ಬಿಣದ ಪೈಪ್ ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ನಸುಕಿನ ಜಾವ 3 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.