HomeKarnatakaSHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಮೈಸೂರಲ್ಲಿ ಕುಸಿದು ಬಿದ್ದು 'SSLC' ವಿದ್ಯಾರ್ಥಿನಿ ಸಾವು.!

SHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಮೈಸೂರಲ್ಲಿ ಕುಸಿದು ಬಿದ್ದು ‘SSLC’ ವಿದ್ಯಾರ್ಥಿನಿ ಸಾವು.!

ಮೈಸೂರು : ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಾಗರಾಜ್ , ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ದೀಪಿಕಾಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ . ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ತುಮಕೂರಿನಲ್ಲೂ ವಿದ್ಯಾರ್ಥಿನಿ ಸಾವು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೃದಯಾಘಾತದಿಂದ ಕುಸಿದುಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ಇತ್ತೀಚೆಗೆ ನಡೆದಿತ್ತು.. ಪಾವಗಡದ ಸರ್ಕಾರಿ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಮೈಥಿಲಿ(19) ಮೃತಪಟ್ಟವರು. ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಶನಿವಾರ ತರಗತಿ ಮುಗಿಸಿ ಪಟ್ಟಣದ ನಿಲ್ದಾಣಕ್ಕೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಪಾವಗಡದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular