ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದ್ದು, ಮೈಸೂರಲ್ಲಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣಮೂರ್ತಿ ಎಂಬುವವರು ಸಂಘವೊಂದರ ಹಣ ಕಟ್ಟಲಾಗದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣ ಕಟ್ಟಲು ಸಾಲಕೊಡಿ ಎಂದು ಕೃಷ್ಣಮೂರ್ತಿ ಹಲವರ ಬಳಿ ಕೇಳಿಕೊಂಡಿದ್ದರು, ಸಾಲ ಸಿಗದೇ ಕಿರುಕುಳ ತಾಳಲಾರದೇ ಸೂಸೈಡ್ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.