HomeKarnatakaBREAKING: ಹಾಡಹಗಲೇ ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಕದ್ದು ಪರಾರಿಯಾದ ಖದೀಮರು

BREAKING: ಹಾಡಹಗಲೇ ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಕದ್ದು ಪರಾರಿಯಾದ ಖದೀಮರು

ಚಿಕ್ಕಬಳ್ಳಾಪುರ: ಹಾಡಹಗಲೇ ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾಂಗಲ್ಯ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿಡಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಲ್ಲರೆ ಅಂಗಡಿಗೆ ಸಾಮಾನು ಖರೀದಿ ನೆಪದಲ್ಲಿ ಬಂದಿದ್ದ ಇಬ್ಬರು ಕಳ್ಳರು, ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ, ಅವರ ಮಾಂಗಲ್ಯ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ.

ಬೈಕ್ ನಲ್ಲಿ ಬಂದಿದ್ದ ಇಬ್ಬರು ಖದೀಮರು ಈ ಕೃತ್ಯವೆಸಗಿದ್ದಾರೆ. ಅನಸೂಯಮ್ಮ ಎಂಬ ಮಹಿಳೆ ಹಲ್ಲೆಗೊಳಗಾಗಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular