ಚಂಡೀಗಢ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಮತ್ತು ಅತ್ಯಾಚಾರ ಆರೋಪಿ ಗುರ್ಮೀತ್ ಸಿಂಗ್ ಗೆ 30 ದಿನಗಳ ಪೆರೋಲ್ ನೀಡಲಾಗಿದೆ.
ಪೆರೋಲ್ ಪಡೆದ ನಂತರ ಅವರು ಮಂಗಳವಾರ ಹರಿಯಾಣದ ರೋಹ್ಟಕ್ನ ಸುನಾರಿಯಾ ಜೈಲಿನಿಂದ ಹೊರಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸಿಂಗ್ 2017ರಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
ಫೆಬ್ರವರಿ 5 ರಂದು ದೆಹಲಿಯಲ್ಲಿ ನಡೆಯಲಿರುವ ಚುನಾವಣೆಗೆ ಕೆಲವು ದಿನಗಳ ಮೊದಲು ಪೆರೋಲ್ ಬಂದಿದೆ. ಸಿರ್ಸಾ ಪ್ರಧಾನ ಕಚೇರಿ ಹೊಂದಿರುವ ಡೇರಾ ಸಚ್ಚಾ ಸೌದಾ ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಅನುಯಾಯಿಗಳನ್ನು ಹೊಂದಿದೆ.