ಬೆಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ವಂತಿಕೆ ನೀಡುವ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಪ್ರಸಕ್ತ ಸಾಲಿನಲ್ಲಿ ಇದುವರೆಗೆ ವಿದ್ಯಾರ್ಥಿಗಳಿಗೆ 23 ಕೋಟಿ ರೂಪಾಯಿ ಪಾವತಿಸಲಾಗಿದೆ.
2024 -25 ನೇ ಸಾಲಿನಲ್ಲಿ 32 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 25,000 ಮಕ್ಕಳಿಗೆ 23 ಕೋಟಿ ರೂಪಾಯಿ ಪ್ರೋತ್ಸಾಹಧನ ಪಾವತಿಸಲಾಗಿದ್ದು, ಉಳಿದ ಅರ್ಜಿಗಳ ಪರಿಶೀಲನೆ ಹಂತದಲ್ಲಿವೆ ಎಂದು ಹೇಳಲಾಗಿದೆ.
ಕಾರ್ಮಿಕರ ಮಕ್ಕಳು ತಮ್ಮ ಶಿಕ್ಷಣಕ್ಕೆ ಮಂಡಳಿಯಿಂದ ಪ್ರೋತ್ಸಾಹಧನ ಪಡೆಯಲು ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಫೆಬ್ರವರಿ 28 ರ ವರೆಗೂ ಪೂರಕ ದಾಖಲೆಗಳನ್ನು ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳ ಶಿಕ್ಷಣ ಆಧರಿಸಿ ವಾರ್ಷಿಕವಾಗಿ 6 ಸಾವಿರದಿಂದ 20,000 ರೂ.ವರೆಗೂ ಪ್ರೋತ್ಸಾಹ ಧನ ಪಡೆಯಬಹುದಾಗಿದೆ.