ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಡಿಕೆಶಿ ಪ್ರಕರವನ್ನು ಲೋಕಾಯಕ್ತಕ್ಕೆ ವರ್ಗಾವಣೆ ಮಾಡಿರುವ ಕುರಿತು ಸಿಬಿಐ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು. ನಂತರ ಈ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.