ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಉತ್ತರ ಪ್ರದೇಶ ಸರ್ಕಾರದಿಂದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಅಲ್ಲದೇ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿ ಕಾಲಮಿತಿಯೊಳಗೆ ವರದಿ ನೀಡುವಂತೆ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಸೇರಿ 30 ಭಕ್ತರು ಮೃತಪಟ್ಟಿದ್ದಾರೆ. 90 ಭಕ್ತರು ಗಾಯಗೊಂಡಿದ್ದಾರೆ. 1920 ಹೆಲ್ಪ್ ಲೈನ್ ನಂಬರ್ ತೆರೆಯಲಾಗಿದೆ.
#WATCH | On Mahakumbh stampede, Uttar Pradesh CM Yogi Adityanath says “We are also announcing financial assistance of Rs 25 lakh each to the families of the deceased who have lost their lives in the accident on behalf of the state government. The judicial commission will look… pic.twitter.com/XStIoFwQD0
— ANI (@ANI) January 29, 2025