HomeKarnatakaಹೋಟೆಲ್, ಮನೆಯಲ್ಲೇ ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಹೋಟೆಲ್, ಮನೆಯಲ್ಲೇ ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಪ್ರತ್ಯೇಕವಾಗಿ ಬೆಂಗಳೂರಿನ 5 ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರು ಮಂದಿ ವಿದೇಶಿ ಮಹಿಳೆಯರು, ಹೊರರಾಜ್ಯದ ನಾಲ್ವರು ಮಹಿಳೆಯರು ಸೇರಿ 10 ಮಹಿಳೆಯರನ್ನು ರಕ್ಷಿಸಲಾಗಿದ್ದು, 7 ಆರೋಪಿಗಳನ್ನು ಬಂಧಿಸಲಾಗಿದೆ.

ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಓರ್ವ ವಿದೇಶಿ ಮಹಿಳೆ, ನಾಲ್ವರು ಹೊರ ರಾಜ್ಯದ ಮಹಿಳೆಯರನ್ನು ರಕ್ಷಿಸಿದ್ದಾರೆ. ಕೆಲಸ ಕೊಡಿಸುವುದಾಗಿ ಅಕ್ರಮವಾಗಿ ಮಾನವ ಕಳ್ಳ ಸಾಗಣೆ ಮಾಡಿ ಮಹಿಳೆಯರನ್ನು ಹೋಟೆಲ್ ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳ ವಿರುದ್ಧ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ರಾಜೇನಹಳ್ಳಿ ಅಪಾರ್ಟ್ಮೆಂಟ್ ವೊಂದರಲ್ಲಿ ದಾಳಿ ನಡೆಸಲಾಗಿದೆ. ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಓರ್ವ ವಿದೇಶಿ ಮತ್ತು ಹೊರ ರಾಜ್ಯದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಮೊಬೈಲ್ ಗಳಲ್ಲಿ ಗಿರಾಕಿಗಳನ್ನು ಸಂಪರ್ಕಿಸಿ ಅಪಾರ್ಟ್ಮೆಂಟ್ ಗೆ ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಮೂರ್ತಿನಗರ ಮತ್ತು ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರು, 4 ವರ್ಷದ ಮಗುವನ್ನು ರಕ್ಷಣೆ ಮಾಡಲಾಗಿದೆ. ಅವರನ್ನು ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ ಸಹಾಯದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಿದ್ದು, ರಾಮಮೂರ್ತಿನಗರ ಮತ್ತು ಹೆಚ್.ಎ.ಎಲ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ವಿದೇಶಿ ಮಹಿಳೆಯನ್ನು ರಕ್ಷಿಸಲಾಗಿದೆ. ಆರೋಪಿಗಳು ಹೆಚ್ಚಿನ ಹಣದ ಆಮಿಷವೊಡ್ಡಿ ಮಹಿಳೆಯನ್ನು ಮನೆಯಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular