ರಾಯಚೂರು : ಕತ್ತು ಸೀಳಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಘಟನೆ ನಡೆದಿದೆ. MSC ಓದುತ್ತಿದ್ದ ಶಿಫಾ (22) ಎಂಬ ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪರಿಚಯಸ್ಥರೇ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಸಿಂಧನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.