HomeKarnatakaಪಿಜಿ ಮೆಡಿಕಲ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಪಿಜಿ ಮೆಡಿಕಲ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಪ್ರಕಟಿಸಿದೆ.

ಒಟ್ಟು 1256 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಅದರ ತಾತ್ಕಾಲಿಕ ಫಲಿತಾಂಶವನ್ನು ಬುಧವಾರ ರಾತ್ರಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿತ್ತು. ಗುರುವಾರ ಅದನ್ನೇ ಅಂತಿಮ ಫಲಿತಾಂಶವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಘೋಷಿಸಿದೆ.

ಸೀಟು ಹಂಚಿಕೆಯಾದವರು ಫೆಬ್ರವರಿ 4ರವರೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು. ಫೆಬ್ರವರಿ 5 ಕಾಲೇಜುಗಳಿಗೆ ವರದಿ ಮಾಡಿಕೊಳ್ಳಲು ಕೊನೆಯ ದಿನವಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular