
ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.
ಇಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ, ಫ್ರೀಡಂ ಪಾರ್ಕ್ ಖಾಲಿ ಮಾಡುವಂತೆ ತಾಕೀತು ಮಾಡಲಾಗಿದೆ. ಶಾಮಿಯಾನದವರಿಗೂ ಪೊಲೀಸರು ಹೆದರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಪ್ರತಿಭಟನೆ ನಿಲ್ಲಿಸದಿದ್ದರೆ ಕೇಸ್ ದಾಖಸಲಾಗುವುದು ಎಂದು ಹೋರಾಟ ನಿರದ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ. ಸಿದ್ದರಾಮಯ್ಯ ಸರ್ಕಾರ ನಮ್ಮ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದೆ. ಹೆಣ್ಣು ಒಲಿದರೆ ನಾರಿ ಮುನಿದರೆ ಮಾರಿ ಎಂದು ಸರ್ಕಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಾರ್ನಿಂಗ್ ಮಾಡಿದ್ದಾರೆ. ನಾಳೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗೆ ಅಂಗನವಾಡಿ ಕಾರ್ಯಕರ್ತೆಯರು ಆಗಮಿಸಲಿದ್ದಾರೆ ಎನ್ನಲಾಗಿದೆ.