HomeEntertainmentBREAKING : ನದಿ ತೀರದಲ್ಲಿ ಬೆಂಕಿ ಹಾಕಿ ಶೂಟಿಂಗ್ : ನಟ ಜೈದ್ ಖಾನ್ ಅಭಿನಯದ...

BREAKING : ನದಿ ತೀರದಲ್ಲಿ ಬೆಂಕಿ ಹಾಕಿ ಶೂಟಿಂಗ್ : ನಟ ಜೈದ್ ಖಾನ್ ಅಭಿನಯದ ‘ಕಲ್ಟ್’ ಸಿನಿಮಾ ಚಿತ್ರೀಕರಣಕ್ಕೆ ತಡೆ.!

ಹೊಸಪೇಟೆ : ನದಿ ತೀರದಲ್ಲಿ ಬೆಂಕಿ ಹಾಕಿ ಶೂಟಿಂಗ್ ನಡೆಸಿದ ಹಿನ್ನೆಲೆ ನಟ ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಚಿತ್ರೀಕರಣಕ್ಕೆ ತಡೆ ನೀಡಲಾಗಿದೆ.

ಸಚಿವ ಜಮೀರ್ ಅಹಮದ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಶೂಟಿಂಗ್ ವೇಳೆ ತುಂಗಭದ್ರಾ ನದಿ ತೀರದಲ್ಲಿ ಬೆಂಕಿ ಚಿತ್ರೀಕರಣ ಮಾಡಲಾಗಿದೆ. ಅರಣ್ಯಾಧಿಕಾರಿಗಳಿಂದ ಅನುಮತಿ ಪಡೆಯದೇ ಶೂಟಿಂಗ್ ಮಾಡಿದ್ದಕ್ಕೆ ಸದ್ಯ ಚಿತ್ರೀಕರಣಕ್ಕೆ ತಡೆ ನೀಡಲಾಗಿದೆ. ಈಗಾಗಲೇ ಹಂಪಿ ಸೇರಿ ಅನೇಕ ಕಡೆ ಚಿತ್ರದ ಶೂಟಿಂಗ್ ನಡೆಸಲಾಗಿದೆ.

ಹಂಪಿಯ ಸ್ನಾನಘಟ್ಟದ ವಿರುಪಾಪುರ ಗಡ್ಡಿ ಸಮೀಪದಲ್ಲಿ ನದಿ ತೀರದಲ್ಲಿ ಬೆಂಕಿ ಹಾಕಿ ಶೂಟಿಂಗ್ ನಡೆಸಲಾಗಿದೆ. ತುಂಗಭದ್ರಾ ನದಿ ತೀರದಲ್ಲಿ ಅಪರೂಪದ ನೀರುನಾಯಿಗಳು ಇರುತ್ತವೆ. ಹಾಗಾಗಿ ಇದನ್ನು ನೀರುನಾಯಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಗಿದೆ. ಈಗ ಈ ಪ್ರದೇಶದಲ್ಲೇ ಚಿತ್ರ ತಂಡ ಬೆಂಕಿ ಹಾಕಿ ಶೂಟಿಂಗ್ ನಡೆಸಿದ್ದು, ಪರಿಸರ ಪ್ರೇಮಿಗಳು ಕಿಡಿಕಾರಿದ್ದರು. ಸದ್ಯ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿತ್ರದ ಚಿತ್ರೀಕರಣಕ್ಕೆ ತಡೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಝೈದ್ ಖಾನ್ ನಟನೆಯ ‘ಕಲ್ಟ್’ ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ , ‘ಉಪಾಧ್ಯಕ್ಷ’ ಖ್ಯಾತಿಯ ಮಲೈಕಾ ವಾಸು ಪಾಲ್ ಈ ಚಿತ್ರದಲ್ಲಿ ಎರಡನೇ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಸಿನಿಮಾ ಗಮನ ಸೆಳೆಯುತ್ತಿದೆ.
ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದು, ಆಶ್ರಿತ್ ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಿದೆ, ಕೆ.ಎಂ. ಪ್ರಕಾಶ್ ಸಂಕಲನ, ರವಿವರ್ಮ ಅವರ ಸಾಹಸ ನಿರ್ದೇಶನ ಹಾಗೂ ಜೆ.ಎಸ್ ವಾಲಿ ಛಾಯಾಗ್ರಹಣವಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular