ನವದೆಹಲಿ: ಗಾಜಿಯಾಬಾದ್‌ನಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಕಿ.ಮೀ ದೂರದವರೆಗೂ ಸ್ಫೋಟದ ಶಬ್ದ ಕೇಳಿಬಂದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಥಾನಾ ಟೀಲಾ ಮಾಡ್ ಪ್ರದೇಶದ ದೆಹಲಿ-ವಜೀರಾಬಾದ್ ರಸ್ತೆಯ ಭೋಪುರ ಚೌಕ್ ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಸರಣಿ ಸ್ಫೋಟದ ಶಬ್ದ ಕೇಳಿಬಂದಿದೆ.
ಅಪಘಾತ ಸ್ಥಳದಿಂದ 2-3 ಕಿ.ಮೀ ದೂರದಿಂದ ದಾಖಲಾಗಿರುವ ವೀಡಿಯೊದಲ್ಲಿ, ಭೋಪುರ ಚೌಕ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ ಭಾರಿ ಬೆಂಕಿ ಹೊತ್ತಿಕೊಂಡಂತೆ ಜೋರಾಗಿ ಸ್ಫೋಟದ ಶಬ್ದ ಕೇಳಿಬರುತ್ತಿದೆ.
ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಹುಲ್ ಕುಮಾರ್ ಪ್ರಕಾರ, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ನೌಕರರು ಸ್ಥಳದಲ್ಲಿದ್ದರು. ಆದರೆ ಸಿಲಿಂಡರ್‌ಗಳು ಸ್ಫೋಟಗೊಳ್ಳುತ್ತಲೇ ಇದ್ದುದರಿಂದ, ಅಗ್ನಿಶಾಮಕ ದಳದ ಸಿಬ್ಬಂದಿ ಟ್ರಕ್ ತಲುಪಲು ಸಾಧ್ಯವಾಗುತ್ತಿಲ್ಲ. ಸಿಲಿಂಡರ್ ಸ್ಫೋಟದ ಶಬ್ದ ಸುತ್ತಮುತ್ತಲ ಪ್ರದೇಶಗಳಲ್ಲಿ ಹಲವಾರು ಕಿ.ಮೀ ದೂರದಿಂದ ಕೇಳಿಬಂದಿದೆ ಎಂದು ಹೇಳಿದ್ದಾರೆ.
ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಿಂದ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಪ್ರಸ್ತುತ ಅಗ್ನಿಶಾಮಕ ಕಾರ್ಯಾಚರಣೆಗಳು ನಡೆಯುತ್ತಿದ್ದು, ಈ ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
#WATCH | Ghaziabad, UP: The blasts can be heard in the video which was shot 2-3 km away from the accident spot where a massive fire broke out in a truck loaded with gas cylinders at Bhopura Chowk. https://t.co/m8wTmWiHLx pic.twitter.com/PXLqfKJycC
— ANI (@ANI) February 1, 2025