ಬಾಗಲಕೋಟೆ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಮತ್ತೊಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ಘಟನೆ ನಡೆದಿದೆ.ಟಾಟಾ ಏಸ್ ವಾಹನ, ಕಾರು, 2 ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ತಲಾ ಒಬ್ಬರು ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್, ಕಾರು, ಟಾಟಾ ಏಸ್ ನಲ್ಲಿದ್ದ ತಲಾ ಒಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.