HomeKarnatakaBIG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : 'ಯಶಸ್ವಿನಿ ಯೋಜನೆ' ನೋಂದಣಿ ಗಡುವು...

BIG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಯಶಸ್ವಿನಿ ಯೋಜನೆ’ ನೋಂದಣಿ ಗಡುವು ಮಾ.31 ರವರೆಗೆ ವಿಸ್ತರಣೆ

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ಇದೀಗ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು ಗಡುವನ್ನು ಮಾ.31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ ನೋಂದಣಿ/ನವೀಕರಣ ಅವಧಿಯನ್ನು ದಿನಾಂಕ: 01-02-2025 ರಿಂದ ದಿನಾಂಕ: 31-03-2025 ರವರೆಗೆ ವಿಸ್ತರಿಸಲು ನಿಬಂಧಕರು ಕೋರಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲು ಹಾಗೂ ಈ ಯೋಜನೆಯಲ್ಲಿ ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular