HomeIndiaBUDGET BREAKING: ಬಜೆಟ್ ಮಂಡನೆ ವೇಳೆ ಸದನದಿಂದ ಹೊರ ನಡೆದ ಎಸ್ ಪಿ ಸಂಸದರು

BUDGET BREAKING: ಬಜೆಟ್ ಮಂಡನೆ ವೇಳೆ ಸದನದಿಂದ ಹೊರ ನಡೆದ ಎಸ್ ಪಿ ಸಂಸದರು

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ-ಕೋಲಾಹಲ ನಡೆಸಿದರು.

ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ತಿಳಿಸಿದ ಸ್ಪೀಕರ್, ಬಜೆಟ್ ಮಂಡನೆಗೆ ವಿತ್ತ ಸಚಿವರಿಗೆ ಸೂಚನೆ ನೀಡಿದರು. ವಿಪಕ್ಷ ಸದಸ್ಯರ ಗದ್ದಲದ ನಡುವೆಯೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದರು. ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಲಾರಂಭಿಸಿದರು.

ಈ ವೇಳೆ ಎಸ್ ಪಿ ಸಂಸದರು ಲೋಕಸಭೆ ಕಲಾಪದಿಂದ ಹೊರ ನಡೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular