ಬೆಂಗಳೂರು : ಸಿಎಂ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜೀನಾಮೆ ನೀಡಿದ ಬಿ.ಆರ್ ಪಾಟೀಲ್ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಸಿಎಂ ಸಲಹೆಗಾರರಗಾಗಿ 1 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಬಿ.ಆರ್ ಪಾಟೀಲ್ ಧಿಡೀರ್ ಆಗಿ ರಾಜೀನಾಮೆ ನೀಡಿದ್ದು, ರಾಜೀನಾಮೆಗೆ ಕಾರಣ ತಿಳಿದು ಬಂದಿಲ್ಲ. ಆಳಂದ ಕ್ಷೇತ್ರದ ಶಾಸಕರಾಗಿರುವ ಬಿಆರ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.