ಬೆಂಗಳೂರು : ಮಂಡಿ ನೋವಿಗೆ ಚಿಕಿತ್ಸೆ ಪಡೆದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ನಿನ್ನೆ ಇದ್ದಕ್ಕಿದ್ದಂತೆ ಎಡಗಾಲಿನ ಮಂಡಿಯಲ್ಲಿ ನೋವಿ ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಶಸ್ತ್ರ ಚಿಕಿತ್ಸೆ ನಡೆದ ಜಾಗದೇ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
2 ದಿನ ಪ್ರಯಾಣ ಮಾಡದೇ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ಸಿಎಂ ಸಿದ್ದರಾಮಯ್ಯಗೆ ವೈದ್ಯರು ಸಲಹೆ ನೀಡಿದ್ದು, ಇಂದು ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲ್ಲ ಎಂದು ತಿಳಿದು ಬಂದಿದೆ.