ರಾಮನಗರ : ವಾಟರ್ ಬೈಕ್ ರೈಡಿಂಗ್ ವೇಳೆ ಅವಾಂತರ ನಡೆದಿದ್ದು, ಡಿಕೆ ಸುರೇಶ್, ಸಿಪಿ ಯೋಗೇಶ್ವರ್ ನೀರಿಗೆ ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದಲ್ಲಿ ನಡೆದಿದೆ.
ಕಣ್ವ ಜಲಾಶಯದಲ್ಲಿ ಸಿಪಿವೈ ಹಾಗೂ ಡಿಕೆಸು ವಾಟರ್ ಬೈಕ್ ರೈಡಿಂಗ್ ಮಾಡುತ್ತಿದ್ದರು. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಕೂಡಲೇ ಇಬ್ಬರು ನಾಯಕರು ಈಜಿ ದಡ ಸೇರಿದ್ದಾರೆ.
ಡಿಕೆ ಸುರೇಶ್ ಮುಂದೆ ವಾಟರ್ ಬೈಕ್ ಓಡಿಸುತ್ತಿದ್ರೆ, ಸಿಪಿ ಯೋಗೇಶ್ವರ್ ವಾಟರ್ ಬೈಕ್ ನಲ್ಲಿ ಹಿಂದೆ ಕುಳಿತಿದ್ದರು. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ.
ಕಣ್ಣು ಹಾಯಿಸಿಷ್ಟು ದೂರ ಸ್ಫಟಿಕದಂತೆ ಹೊಳೆಯುತ್ತಿರುವ ನೀರು, ಪ್ರಕೃತಿಯ ಹೊದಿಕೆಯಲ್ಲಿ, ಪ್ರಶಾಂತ ವಾತಾವರಣದಲ್ಲಿರುವ ನಮ್ಮ ರಾಮನಗರ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣ ಕಣ್ವ ಜಲಾಶಯ. ಇಂದು ಸಹೋದರ ಹಾಗೂ ಉಪ ಮುಖ್ಯಮಂತ್ರಿಗಳಾದ DKShivakumarಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಸಕರಾದ @CPYogeeshwara ಅವರೊಂದಿಗೆ ಬೋಟಿಂಗ್ ವಿಹಾರ ಕೈಗೊಂಡಿದ್ದು ಒಂದು ವಿಶಿಷ್ಟ ಅನುಭೂತಿಯಾಗಿತ್ತು. ಇಂತಹ ಅನುಭವವನ್ನು ಹುಡುಕಿಕೊಂಡು ವಿದೇಶಕ್ಕೆ ಹೋಗಬೇಕಾಗಿಲ್ಲ. ನಮ್ಮ ಜಿಲ್ಲೆಯ ಸ್ಥಳೀಯ ಪ್ರವಾಸೋದ್ಯಮವನ್ನು, ಜಲಕ್ರೀಡೆಗಳನ್ನು ಉತ್ತೇಜಿಸಲು ನಾವೆಲ್ಲರೂ ಕೈಜೋಡಿಸುತ್ತಿದ್ದೇವೆ. ನೀವೂ ಜೊತೆಯಾಗಿ ಡಿಕೆ ಸುರೇಶ್ ಟ್ವೀಟ್ ಮಾಡಿದ್ದಾರೆ.
ಕಣ್ಣು ಹಾಯಿಸಿಷ್ಟು ದೂರ ಸ್ಫಟಿಕದಂತೆ ಹೊಳೆಯುತ್ತಿರುವ ನೀರು, ಪ್ರಕೃತಿಯ ಹೊದಿಕೆಯಲ್ಲಿ, ಪ್ರಶಾಂತ ವಾತಾವರಣದಲ್ಲಿರುವ ನಮ್ಮ ರಾಮನಗರ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣ ಕಣ್ವ ಜಲಾಶಯ. ಇಂದು ಸಹೋದರ ಹಾಗೂ ಉಪ ಮುಖ್ಯಮಂತ್ರಿಗಳಾದ @DKShivakumar ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಸಕರಾದ ಶ್ರೀ @CPYogeeshwara ಅವರೊಂದಿಗೆ ಬೋಟಿಂಗ್ ವಿಹಾರ… pic.twitter.com/aTGs3LYSnU
— DK Suresh (@DKSureshINC) February 2, 2025