ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಈಜಲು ಕೆರೆಗೆ ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗಣೇಶ್ (29) ರೋಹಿತ್ (28 ) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ಕೆರೆಗೆ ತೆರಳಿದ್ದ ಯುವಕರು ಮೇಲೆ ಬಾರಲು ಸಾಧ್ಯವಾಗದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.