ತುಮಕೂರು : ತುಮಕೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ.
ತುಮಕೂರಿನ ರೈಲ್ವೇ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಈ ಘಟನೆ ನಡೆದಿದೆ. ಚಾಯಂಕ್ ಗೌಡ ಎಂಬ ಯುವಕ ರೈಲಿನಿಂದ ಇಳಿಯುತ್ತಿದ್ದಾಗ ಆಕಸ್ಮಾತ್ ಆಗಿ ರೈಲಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
ತುರುವೇಕೆರೆಯ ಅಮ್ಮಸಂದ್ರ ಗ್ರಾಮದ ಯುವಕ ಚಾಯಂಕ್ ಗೌಡ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.