ಮಂಡ್ಯ: ಮಂಡ್ಯದ ವಿಸಿ ನಾಲೆಗೆ ಕಾರೊಂದು ಪಲ್ಟಿಯಾಗಿದ್ದು, ಓರ್ವ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಗ್ರಾಮದ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಓರ್ವ ಮೃತಪಟ್ಟಿದ್ದಾರೆ. ನಾಲೆಯಲ್ಲಿ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದೆ. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ಮೇಲೆತ್ತಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.