HomeKarnatakaBIG NEWS : ಅಪಘಾತದಲ್ಲಿ ಮೃತಪಟ್ಟ 'BMTC' ನೌಕರರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ...

BIG NEWS : ಅಪಘಾತದಲ್ಲಿ ಮೃತಪಟ್ಟ ‘BMTC’ ನೌಕರರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿಮೆ ವಿತರಣೆ

ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಬಿಎಂಟಿಸಿಯ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ವಿಮೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಿಸಿದ್ದಾರೆ.

ಅಪಘಾತ ವಿಮೆ ₹1.5 ಕೋಟಿ ನೀಡುವ ಯೋಜನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅಪಘಾತದಲ್ಲಿ ನೌಕರರು ಮೃತಪಟ್ಟ ಪ್ರಕರಣಗಳಲ್ಲಿ ಅವರ ಕುಟುಂಬಕ್ಕೆ ವಿಮೆ ಭದ್ರತೆ ₹1 ಕೋಟಿ, ಸಂಸ್ಥೆಯಿಂದ ₹50 ಲಕ್ಷ ಪರಿಹಾರ ದೊರೆಯಲಿದೆ.

ಅಪಘಾತ ಹೊರತುಪಡಿಸಿ ಅನಾರೋಗ್ಯ, ಇನ್ನಿತರ ಕಾರಣದಿಂದ ಮೃತಪಟ್ಟ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗಿದೆ. ಬಿಎಂಟಿಸಿಯಲ್ಲಿ ಜಾರಿಯಲ್ಲಿದ್ದ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಿ 2024ರ ಫೆ.19ರಂದು ಜಾರಿ ಮಾಡಲಾಗಿತ್ತು. ಆ ನಂತರದ ಅವಧಿಯಲ್ಲಿ ಈವರೆಗೆ 86 ನೌಕರರು ಮೃತಪಟ್ಟಿದ್ದಾರೆ. ಪರಿಶೀಲನೆ ಹಂತದಲ್ಲಿ 31 ಪ್ರಕರಣಗಳಿದ್ದು, ಉಳಿದವರಿಗೆ ಪರಿಹಾರ ವಿಮೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular