ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸಂಸ್ಕೃತಿ ಅರಿವು ಮೂಡಿಸುವ ದೃಷ್ಟಿಯಿಂದ “ಯುವಸ್ಪಂದನ ”ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ, ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ.
ಆದುದರಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸ್ವಾಮಿ ವಿವೇಕಾನಂದರ ಜಂಯತಿ ಪ್ರಯುಕ್ತ “ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ” ನಡೆಸುವಂತೆ ಸೂಚಿಸಲಾಗಿದೆ. (ಪ್ರತಿ ಲಗತ್ತಿಸಿದೆ).