ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಫೈರಿಂಗ್ ಮಾಡಿ ರೌಡಿಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಫೈರಿಂಗ್ ಮಾಡಿ ಆರೋಪಿ ಶ್ರೀನಿವಾಸ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 28 ರಂದು ರಾತ್ರಿ ವೆಂಕಟೇಶ್ ನನ್ನು ಶ್ರೀನಿವಾಸ ಮತ್ತು ಗ್ಯಾಂಗ್ ಕೊಲೆ ಮಾಡಿತ್ತು, ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಶ್ರೀನಿವಾಸ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ನವೀನ್ ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್ ಗೆ ಗುಂಡು ಹಾರಿಸಿ ಸರ್ಜಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.