ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ.
ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕ್ಕಮಗಳೂರಿನ ಖಂಡ್ಯಾ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆ ಎಫ್ ಡಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ 7 ಜನರ್ಲ್ಲಿ ಸೋಂಕು ಪತ್ತೆಯಾಗಿದೆ.
ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ ಎಫ್ ಡಿ ವಾರ್ಡ್ ತೆರೆಯಲಾಗಿದೆ.
ಕೊಪ್ಪ, ಎನ್ ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಆರೋಗ್ಯ ಇಲಾಕೆ ಮಂಗನ ಕಾಯಿಲೆ ಬಗ್ಗೆ ಅಲರ್ಟ್ ಘೋಷಣೆ ಮಾಡಿದೆ. ಖಾಂಡ್ಯ ಹೋಬಳಿ ಮತ್ತಿಖಂಡ ಗ್ರಾಮದಲ್ಲಿ ಉಣ್ಣೆ ಸಂಗ್ರಹ ಮಾಡಲಾಗುತ್ತಿದ್ದು, ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹವಾಗಿದೆ. ಜಿಲ್ಲೆಯಾದ್ಯಂತ ಕೆ ಎಫ್ ಡಿ ಆತಂಕ ಹೆಚ್ಚಿಸಿದೆ.