ಕಲಬುರಗಿಯ : ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡಾಯಿಸಿದೆ.
ಕಲಬುರಗಿಯ ಕರುಣೇಶ್ವರ ನಗರದ ಶಾಲೆಗೆ ಬೆದರಿಕೆ ಬಂದಿದ್ದು, ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಪೋಟಿಸುದಾಗಿ ಇಮೇಲ್ ಬಂದಿದೆ. ಬೆದರಿಕೆ ಇಮೇಲ್ ಬಂದ ಹಿನ್ನೆಲೆ ಮಕ್ಕಳನ್ನು ಶಾಲೆಯಿಂದ ಮನೆಗೆ ಕಳುಹಿಸಲಾಗಿದೆ.
ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಅಶೋಕ ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ತಮಿಳುನಾಡಿನಿಂದ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.