ಕೊಪ್ಪಳ : ಅಡುಗೆ ಮಾಡುವಾಗ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದಿದೆ.
ಬಿಸಿಯೂಟದ ಅಡುಗೆ ತಯಾರಿಸುವಾಗ ಅಡುಗೆ ಕೋಣೆಯಲ್ಲಿ ಗ್ಯಾಸ್ ಲೀಕ್ ಆಗಿದ್ದು, ಬೆಂಕಿ ಹೊತ್ತಿಕೊಂಡಿದೆ.
ಪರಿಣಾಮ ಅಡುಗೆ ಕೋಣೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ಅದೃಷವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.