ಬೆಂಗಳೂರು : ಫೆಬ್ರವರಿ 12 ರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ ಆರಂಭವಾಗಲಿದ್ದು, 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ.
ಫೆಬ್ರವರಿ 12 ರಿಂದ ಆರಂಭವಾಗುವ ʼಇನ್ವೆಸ್ಟ್ ಕರ್ನಾಟಕ 2025ʼ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 11ರ ಸಂಜೆಯೇ ಸಮಾವೇಶ ಉದ್ಘಾಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಫೆಬ್ರವರಿ 12 ರಿಂದ 14ರ ವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 18 ದೇಶಗಳ ಸುಮಾರು 2,000 ಹೂಡಿಕೆದಾರರು ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ. ವಿವಿಧ ದೇಶಗಳ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಲಿದ್ದಾರೆ. 9 ದೇಶಗಳು ತಮ್ಮ ಪೆವಿಲಿಯನ್ಗಳನ್ನು ತೆರೆಯಲು ಮುಂದೆ ಬಂದಿವೆ. 10 ದೇಶಗಳ ಉನ್ನತಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಫೆಬ್ರವರಿ 12 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಸಲುವಾಗಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗವು 16 ದೇಶಗಳ ಪ್ರಮುಖರನ್ನು ಭೇಟಿಯಾಗಿ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. ಸಮಾವೇಶದ ಉದ್ಘಾಟನೆ ಬಳಿಕ ಹಲವು ಪ್ರಮುಖ ಕಂಪನಿಗಳು ಬಂಡವಾಳ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಿವೆ.