ಮಂಡ್ಯ: ಮಂಡ್ಯ ಜಿಲ್ಲೆಯ ಪಿಡಬ್ಲ್ಯೂಡಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮಂಡ್ಯದ ಸಂಜಯ್ ವೃತ್ತ ಸಮೀಪವಿರುವ ಲೋಕೋಪಯೋಗಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ನಿಯಮಾನುಸಾರವಾಗಿ ಗುತ್ತಿಗೆದಾರರರಿಗೆ ಬಿಲ್ ಪಾವತಿಸದ ಹಿನ್ನೆಲೆ ಹಾಗೀ ಸೀನಿಯಾರಿಟಿ ಮೇಲೆ ಅಧಿಕಾರಿಗಳು ಗುತ್ತಿಗೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು.
ಗುತ್ತಿಗೆದಾರರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. PWD ಚೀಫ್ ಇಂಜಿನಿಯರ್, ಇಇ ಸೇರಿ ಹಲವು ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ.