ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾವ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ಸಿಎಂ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿನ ಚರ್ಚೆಯಷ್ಟೇ. ಯಾವ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಘೋಷಣೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವಿನಾಕಾರನ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ, ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.