alex Certify BREAKING : 2023-24ನೇ ಸಾಲಿನ ‘RTE’ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸುವ ದಿನಾಂಕ ವಿಸ್ತರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2023-24ನೇ ಸಾಲಿನ ‘RTE’ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸುವ ದಿನಾಂಕ ವಿಸ್ತರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : ಶಿಕ್ಷಣ ಹಕ್ಕು ಕಾಯಿದೆ 2009ರ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2023-24ನೇ ಸಾಲಿನ ಪ್ರಥಮ ಕಂತಿನ ಶುಲ್ಕ ಮರುಪಾವತಿಗೆ ಸಂಬಂಧಿಸಿದ ಶಾಲೆಗಳು ಆನ್ಲೈನ್ ಮೂಲಕ ಬೇಡಿಕೆ ಸಲ್ಲಿಸಲು ದಿನಾಂಕ : 01.12.2023 ರಿಂದ ತಂತ್ರಾಂಶವನ್ನು ಬಿಡುಗಡೆ ಮಾಡಿ, ಅಂತಿಮ ದಿನಾಂಕವನ್ನು ಹಲವು ಬಾರಿ ವಿಸ್ತರಣೆ ಮಾಡಿ ದಿನಾಂಕ : 13.09.2024 ವರೆಗೆ ಅವಕಾಶ ನೀಡಲಾಗಿತ್ತು.

ಹಲವಾರು ಸಲ ಅವಕಾಶ ನೀಡಲಾಗಿದ್ದರೂ ಸಹ ಕೆಲವು ಶಾಲೆಗಳು 2023-24ನೇ ಸಾಲಿನ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಿರುವುದಿಲ್ಲ. 2023-24ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಅರ್ಜಿ ಸಲ್ಲಿಸಲು ಬಾಕಿಯಿರುವ ಶಾಲೆಗಳಿಗೆ ಅಂತಿಮ ಅವಕಾಶವಾಗಿ ದಿನಾಂಕ : 03.02.2025 ರಿಂದ 04.03.2025 ರವರೆಗೆ 2023-24ನೇ ಸಾಲಿನ ಮೊದಲ ಕಂತಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ತಂತ್ರಾಂಶವನ್ನು ಬಿಡುಗಡೆ ಮಾಡಿದೆ.

ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿ 2023-24ರ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸದ ಶಾಲೆಗಳನ್ನು ಗುರುತಿಸಿ, ನೀಡಿರುವ ಕಾಲಾವಧಿಯೊಳಗೆ ಬೇಡಿಕೆ ಸಲ್ಲಿಸುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅಗತ್ಯ ಕ್ರಮಗೊಳ್ಳಲು ಸೂಚಿಸಿದೆ. ಅಂತಿಮ ದಿನಾಂಕದ ನಂತರ ಯಾವುದೇ ಶಾಲೆ ಅರ್ಜಿ ಸಲ್ಲಿಸದೇ ಪುನ: ಅವಕಾಶ ಕೋರಿ ಮನವಿಗಳು ಸ್ವೀಕೃತವಾದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಸ್ಪಷ್ಟಪಡಿಸಿದೆ. ಉಳಿದಂತೆ ಉಲ್ಲೇಖ (3)ರ ದಿನಾಂಕ : 28.11.2023ರ ಸುತ್ತೋಲೆಯಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ ಎಂದು ಸುತ್ತೋಲೆ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...