ಬೆಂಗಳೂರು : PGMedical-24 ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
ಫೆ.8ರೊಳಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು, ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು.
2024ನೇ ಸಾಲಿನ ಪಿಜಿವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಮಾಪ್ ಅಪ್ ಸುತ್ತಿನಲ್ಲಿ ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮತ್ತು ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಲು ಈ ಕೆಳಗಿನಂತೆ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಇಲ್ಲಿಯವರೆಗೆ ಶುಲ್ಕ ಪಾವತಿಸದೇ ಇರುವ ಆಸಕ್ತ ಅಭ್ಯರ್ಥಿಗಳು ಶುಲ್ಕ ಪಾವತಿಸಿ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. (ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ 2848/2025 ರಲ್ಲಿ ದಿನಾಂಕ 04-02-2025 ರಂದು ನೀಡಿರುವ ಆದೇಶವು ಅನ್ವಯಿಸುತ್ತದೆ).
#PGMedical-24 ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಫೆ.8ರೊಳಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು, ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು.@CMofKarnataka@drmcsudhakar pic.twitter.com/j8cAYM8pAS
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) February 5, 2025