ತುಮಕೂರು: ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಕಂದಾಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರೊಬ್ಬರು ತಾಲೂಕು ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕು ಕಚೆರಿಯಲ್ಲಿ ನಡೆದಿದೆ.
ತುರುವೆಕೆರೆ ದೊಡ್ಡಾಘಟ್ಟಿ ಗ್ರಾಮದ ರೈತ ಜಯಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ರೈತ. ಕಂದಾಯ ಅಧಿಕಾರಿಗಳ ವರ್ತನೆಗೆ ಬೇಸತ್ತ ರೈತ ಜಯಕುಮಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ತುರುವೆಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.