ಅಮಾನವೀಯ ಘಟನೆಯೊಂದು ನಡೆದಿದ್ದು, ಅಂಗನವಾಡಿ ಸಹಾಯಕಿಯೊಬ್ಬಳು ಚಮಚ ಕಾಸಿ ಬಾಲಕಿ ಕೆನ್ನೆಗೆ ಬರೆ ಹಾಕಿದ ಘಟನೆ ಬಾಗಲಕೋಟೆ ಜಿಲ್ಲೆಯ ಗುಲಗಾಲಜಂಬಗಿ ಗ್ರಾಮದಲ್ಲಿ ನಡೆದಿದೆ.
ಪ್ರೀತಿ ಎಂಬ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅಂಗನವಾಡಿ ಕಾರ್ಯಕರ್ತೆ ಶೋಭಾ ಹೊಳೆಪ್ಪನವರ, ಸಹಾಯಕಿ ಶಾರವ್ವ ಪಂಚಗಾವಿ ಈ ಕೃತ್ಯ ನಡೆಸಿರುವ ಆರೋಪ ಕೇಳಿಬಂದಿದೆ.
ಕ್ಷುಲ್ಲಕ ಕಾರಣಕ್ಕೆ ಅನ್ನದ ಚಮಚದಿಂದ ಬಾಲಕಿ ಕೆನ್ನೆಗೆ ಬರೆ ಹಾಕಿ ವಿಕೃತಿ ಮೆರೆಯಲಾಗಿದೆ. ಸದ್ಯ ಇಬ್ಬರನ್ನು ಅಮಾನತು ಮಾಡಲಾಗಿದೆ. ಗಾಯಾಳು ಬಾಲಕಿಗೆ ಲೋಕಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.