ರಾಯಚೂರು : ರಾಯಚೂರಿನಲ್ಲಿ 7 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರಿನ ಮಾನ್ವಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ 2 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಕಾಮುಕ ಶಿವನಗೌಡ ಅತ್ಯಾಚಾರ ಎಸಗಿದ್ದಾನೆ.
ಬಳಿಕ ಅಲ್ಲಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.