ಬೆಂಗಳೂರು : ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಶಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
2008 ರಲ್ಲಿ ಎಸ್ ಬಿ ಎಂ ಬ್ಯಾಂಕ್ ದಾಖಲಿಸಿದ್ದ ವಂಚನೆ, ಪೋರ್ಜರಿ ಕೇಸ್ ನಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಶಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. 7.17 ಕೋಟಿ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಸರ್ಕಾರಿ ನೌಕರರ ದಾಖಲೆ ಸೃಷ್ಟಿಸಿ ಸಾಲ ಪಡೆದಿರುವ ಕೃಷ್ಣಯ್ಯ ಶೆಟ್ಟಿಯ ಅಪರಾಧಕ್ಕೆ ಸದ್ಯದಲ್ಲೇ ಕೋರ್ಟ್ ಪ್ರಕಟಿಸುವ ಸಾಧ್ಯತೆಯಿದೆ.