ನವದೆಹಲಿ : ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಬಜೆಟ್ ನಲ್ಲಿ ಘೋಷಿಸಿದ್ದ ಕೆಲವು ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಚರ್ಚಿಸಿ ನಾಳೆ ಜಾರಿಗೊಳಿಸುವ ಸಾಧ್ಯತೆಯಿದೆ. ಹಾಗೂ ಹೊಸ ಐಟಿ ಮಸೂದೆ ಜಾರಿಗೊಳಿಸುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಿದ್ದಾರೆ.