ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಬಿಟ್ ಕಾಯಿನ್ ಕೇಸ್ ನಲ್ಲಿ ಪೊಲೀಸರು ನಲಪಾಡ್ ವಿಚಾರಣೆಗೆ ನೋಟಿಸ್ ನೀಡಿರುವ ವಿಚಾರವಾಗಿ, ನೋಟಿಸ್ ಕೊಟ್ಟಿದ್ದರೆ ವಿಚಾರಣೆ ಮಾಡುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.
ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾಧಿಕಾರಿಗಳಿಗೆ ಯಾರನ್ನು ವಿಚಾರಣೆ ನಡೆಸಬೇಕು ಅನ್ನಿಸುತ್ತದೆ ತನಿಖಾಧಿಕಾರಿಗಳು ಅವರನ್ನು ವಿಚಾರಣೆ ಮಾಡುತ್ತಾರೆ. ಅದರಲ್ಲಿ ನಲಪಾಡ್ ಕೂಡ ಒಬ್ಬರು ಎಂದರು.
ನಲಪಾಡ್ ಹಾಗೂ ಶ್ರೀಕಿ ನಡುವೆಸಂಬಂಧ ಇದೆಯೇ ಇಲ್ಲವೇ? ಹಣಕಾಸು ವ್ಯವಹಾರ ಇದೆಯಾ ಇಲ್ಲವಾ? ಎಂಬುದನ್ನು ತನಿಖೆ ಮಾಡ್ತಾರೆ. ಇನ್ವೆಸ್ಟಿಗೇಷನ್ ಅಂದ್ರೆ ಅದೇ ತಾನೆ? ಇದರ ಬಗ್ಗೆ ಸರ್ಕಾರ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದರು.