![](https://kannadadunia.com/wp-content/uploads/2022/10/karnataka-lokayukta.jpg)
ಮಂಡ್ಯ: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ಪತಿ ಶೇಖರ್ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮನೋಹರ್ ಅರಸ್ ಲೋಕಾಯುಕ್ತ ಬಲೆಗೆ ಬಿದ್ದವರು.
ಮಾಗನೂರು ಗ್ರಾಮದ ನಿವಾಸಿ ಶಂಕರ್ ಎಂಬುವವರಿಂದ 1 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಶೇಖರ್ ಹಾಗೂ ಮನೋಹರ್ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಹಂತವಾಗಿ 1 ಲಕ್ಷ ರೂ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.